ಮುಧೋಳ, ಫೆಬ್ರವರಿ 12:

ಮುಧೋಳ ತಾಲೂಕಿನ ಸೊರಗಾವಿ ಗ್ರಾಮದ ಸಮೀಪ ಸಿಮೆಂಟ್ ತುಂಬಿದ ಲಾರಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ.ಮುಧೋಳ–ಮಹಾಲಿಂಗಪುರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಮಂಜುಳ ದಳವಾಯಿ (28) ಮತ್ತು ಅವರ ಒಂದು ವರ್ಷದ ಮಗಳು ವೇದಾ ದಳವಾಯಿ ಎಂದು ಗುರುತಿಸಲಾಗಿದೆ. ಲಾರಿ ಡಿಕ್ಕಿಯ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಬಿದ್ದು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಬೈಕ್ ಅನ್ನು ಮಂಜುಳಾ ಅವರ ಮೈದುನ ಹನುಮಂತ ದಳವಾಯಿ ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಅವರಿಗೆ ಗಾಯಗಳಾಗಿದ್ದು, ತಕ್ಷಣವೇ ಮುಧೋಳ ಸರಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಳಲಿ ಗ್ರಾಮದಿಂದ ಮುಧೋಳ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ತಿಳಿದು ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಈ ಘಟನೆ ಸ್ಥಳೀಯರಲ್ಲಿ ತೀವ್ರ ದುಃಖ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

by ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *