ರಿಪ್ಪನ್‌ಪೇಟೆ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ ಅವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಜಿ.ಡಿ. ಮಲ್ಲಿಕಾರ್ಜುನ್ ಮತ್ತು ಕಟ್ಟೆ ಅರುಣ್ ಅವರನ್ನು ನೇಮಕಗೊಳಿಸಿ ಹೊಸನಗರ ಮಂಡಲ ಅಧ್ಯಕ್ಷ ಎನ್. ಸತೀಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕೆರೆಹಳ್ಳಿ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿದ್ದ ಎನ್. ಸತೀಶ್ ಅವರು ಹೊಸನಗರ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದ ಜಿಲ್ಲಾ ಸಮಿತಿಯ ಸೂಚನೆಯ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.ನೇಮಕಗೊಂಡ ನಂತರ ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನೂತನ ಅಧ್ಯಕ್ಷ ಸುಂದರೇಶ್ ಕೆರೆಹಳ್ಳಿ, ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸೂಚಿಸುವ ಕೆಲಸಗಳನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಹೇಳಿದರು.

ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ, ದೇವರಾಜ ಕೆರೆಹಳ್ಳಿ, ಮೆಣಸೆ ಆನಂದ್, ಸಂಜು ಕೆಂಚನಾಲ, ರಾಜೇಶ್ ಬುಕ್ಕಿವರೆ, ಕುಮಾರ್ ಕಳಸೆ, ಮಹೇಶ್, ವೆಂಕಟರಮಣ ಚಿಕ್ಕಜೀನಿ, ಸುಧೀರ್ ಪಿ, ಮುರುಳಿ ಕೆರೆಹಳ್ಳಿ, ಕಗ್ಗಲಿ ಲಿಂಗಪ್ಪ, ಗಣೇಶ್, ನಾರಾಯಣ್, ಪದ್ಮಾ ಸುರೇಶ್, ನಾಗರತ್ನ ದೇವರಾಜ್, ರೇಖಾ ರವಿ, ದಾನಮ್ಮ ಮಂಜುಳಾ ಕೆತಾರ್ಜಿ, ವಿಮಲಮ್ಮ ಸುಧೀಂದ್ರ ಪೂಜಾರಿ, ಆಟೋ ಗುರು, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಕೆರೆಹಳ್ಳಿ ಅಂಜನ್

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *