ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲು ಹಳ್ಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿರುವ ಘಟನೆ ಫೆಬ್ರವರಿ 17, 2026 ರಂದು ನಡೆದಿದೆ.

ಎಫ್‌ಐಆರ್ ವಿವರಗಳ ಪ್ರಕಾರ, ಫೆಬ್ರವರಿ 17ರಂದು ಸಂಜೆ 6.00 ಗಂಟೆ ವೇಳೆಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಲ್ಲು ಹಳ್ಳ ಗ್ರಾಮದ ಅಂಗಡಿ ಮುಂಗಟ್ಟು ಪ್ರದೇಶದ ಬಳಿ ದಾಳಿ ನಡೆದಿದೆ. ಈ ವೇಳೆ ಯಾವುದೇ ಮಾನ್ಯ ಪರವಾನಗಿ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುವ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಆರೋಪಿಯ ಬಳಿ ಸುಮಾರು 90 ಎಂಎಲ್ ಸಾಮರ್ಥ್ಯದ “ಒರಿಜಿನಲ್ ಚಾಯ್ಸ್ ಡಿಲಕ್ಸ್ ವಿಸ್ಕಿ” ಸೇರಿದಂತೆ ಮದ್ಯದ ಪ್ಯಾಕೆಟ್‌ಗಳು ಮತ್ತು ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಿದ ಮದ್ಯದ ಒಟ್ಟು ಮೌಲ್ಯ ಸುಮಾರು 600 ರೂಪಾಯಿಗಳಷ್ಟಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 15(ಎ), 3 ಸೇರಿದಂತೆ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಾಗಿದ್ದು, ಪ್ರಕರಣವು ತೀರ್ಥಹಳ್ಳಿ ಉಪವಿಭಾಗದ ವ್ಯಾಪ್ತಿಗೆ ಒಳಪಟ್ಟಿದೆ.

ಈ ಸಂಧರ್ಭದಲ್ಲಿ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ್ ಹಾಗೂ ಅವಿನಾಶ್ ಉಪಸ್ಥಿತರಿದ್ದರು.

ಬಂಧಿತನ ವಿರುದ್ಧ ಮುಂದಿನ ತನಿಖೆ ಮುಂದುವರಿದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಾರದಿ :ಕೆರೆಹಳ್ಳಿ ಅಂಜನ್

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *