ಸಾಗರ: ತಾಲ್ಲೂಕಿನ ಆನಂದಪುರ ಗ್ರಾಮದ ಅಶೋಕ ರಸ್ತೆಯಲ್ಲಿ 27 ವರ್ಷದ ಯುವಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ನವೀನ್ (27) ಎಂದು ಗುರುತಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಅವರು ಚಿಕ್ಕ ಮಟ್ಟದಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಹೆಚ್ಚು ಮೌನಿಯಾಗಿದ್ದು, ಯಾರೊಂದಿಗೆ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಘಟನೆ ವಿವರ :ಮಾಹಿತಿ ಪ್ರಕಾರ, ನಿನ್ನೆ ಮಧ್ಯಾಹ್ನ ನವೀನ್ ಹೊಟ್ಟೆ ಹಸಿಯಾಗಿದೆ ಎಂದು ಹೇಳಿ ಊಟ ಮಾಡಿದ್ದರು. ಬಳಿಕ ಮನೆಯಲ್ಲಿ ಇದ್ದರು. ಇದೇ ವೇಳೆ ಮನೆಯವರು ಜಾತ್ರೆಯ ಪ್ರಯುಕ್ತ ಮನೆ ಹಿಂಭಾಗ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದರು.ಸಂಜೆ ಸುಮಾರು 5 ಗಂಟೆ ಸಮಯದಲ್ಲಿ ಮನೆಯ ಒಳಗಡೆ ಬಂದಾಗ ನವೀನ್ ಹಗ್ಗದಿಂದ ನೇಣು ಹಾಕಿಕೊಂಡು ನೇತಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಅಕ್ಕಪಕ್ಕದವರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಪರಿಶೀಲಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪೊಲೀಸ್ ಪ್ರಕರಣ ದಾಖಲು : ಯಾವುದೋ ಕಾರಣಕ್ಕೆ ಮನಸ್ಸಿಗೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಮೃತನ ತಾಯಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

ವರದಿ : ವಿಠ್ಠಲ್ ರಾವ್ ಹೊಸನಗರ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *