ರಿಪ್ಪನ್ ಪೇಟೆ : ಕೊಡೂರಿನಿಂದ ಜೆಡಿಸರ ಕಡೆಗೆ ಸಾಗುತ್ತಿದ್ದ ಕೆಎ–22ಪಿ–8519 ಸಂಖ್ಯೆಯ ಓಮಿನಿ ವಾಹನವು ರಿಪ್ಪನ್ ಪೇಟೆಯ ಆನೆಕೆರೆ ಬಳಿ ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಓಮಿನಿ ವಾಹನ ಸಂಪೂರ್ಣ ನುಚ್ಚು ಗುಜ್ಜಾಗಿದ್ದರೆ, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ವಾಹನದಲ್ಲಿದ್ದವರು ಜೀವಾಪಾಯದಿಂದ ಪಾರಾಗಿದ್ದಾರೆ.

ವಾಹನದಲ್ಲಿ ತಂದೆ ಹಾಗೂ ಮಗ ಪ್ರಯಾಣಿಸುತ್ತಿದ್ದು, ಗಾಯಗೊಂಡವರನ್ನು ಬಸವರಾಜ್ ಹಾಗೂ ಸ್ವಾಮಿ ಗೌಡ್ರು ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.ಅಪಘಾತದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *