
ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ನಿನ್ನೆ ಸಂಜೆ ಈ ಭೀಕರ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.
Boy murder
ಮೃತ ಬಾಲಕ
ಜಗಳ ಬಿಡಿಸಲು ಹೋದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಮೇಲೆ ಅನ್ಯ ಕೋಮಿನ ಬಾಲಕರು ಮಾರಣಾಂತಿಕ ಹಲ್ಲೆ ನಡೆಸಿ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ನಗರದ ಸೂಳೆಬೈಲು ಬಡಾವಣೆಯಲ್ಲಿ ನಿನ್ನೆ ಸಂಜೆ ಈ ಭೀಕರ ಘಟನೆಯೊಂದು ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.
ಮೃತ ಬಾಲಕನನ್ನು ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಕೇತ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಕೆಲ ವಿದ್ಯಾರ್ಥಿಗಳ ನಡುವೆ ಜಗಳ ನಡೆಯುತ್ತಿತ್ತು. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಾಗ ಅದನ್ನು ಬಿಡಿಸಲೆಂದು ಸಂಕೇತ್ ಮಧ್ಯಪ್ರವೇಶಿಸಿದ್ದಾನೆ. ಆದರೆ, ಇದೇ ವೇಳೆ ಏಳು ವಿದ್ಯಾರ್ಥಿಗಳು ಅವನ ಮೇಲೆ ಹಲ್ಲೆ ನಡೆಸಿದರೆಂದು ತಿಳಿದುಬಂದಿದೆ.ಶಿವಮೊಗ್ಗ ತುಂಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
⁉️ಅಸಲಿಗೆ ನಡೆದಿದ್ದೇನು?
ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ತರಗತಿ ಮುಗಿಸಿ ಬರುವಾಗ ಗಿರೀಶ್ ಎಂಬ ವಿದ್ಯಾರ್ಥಿಯ ಮೇಲೆ ಅನ್ಯಕೋಮಿನ ಕೆಲ ಬಾಲಕರು ಏಕಾಏಕಿ ಹಲ್ಲೆ ಮಾಡಿದ್ದಾರೆ. ಇದನ್ನು ನೋಡಿ ತನ್ನ ಆಪ್ತ ಸ್ನೇಹಿತನನ್ನು ಕಾಪಾಡಲು ಸಂಕೇತ್ ಧಾವಿಸಿದ್ದಾನೆ. ಆದರೆ, ದುಷ್ಕರ್ಮಿಗಳು ಗಿರೀಶ್ ಬಿಟ್ಟು ಸಂಕೇತ್‌ನ ಮುಖ, ಎದೆ, ಹೊಟ್ಟೆ ಭಾಗಕ್ಕೆ ತೀವ್ರವಾಗಿ ಹೊಡೆದಿದ್ದಾರೆ. ತೀವ್ರವಾಗಿ ಗಾಯಗೊಂಡು ಕುಸಿದುಬಿದ್ದ ಸಂಕೇತ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
📌ಕುಟುಂಬದ ಆಕ್ರಂದನ:
ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಹೆತ್ತವರ ರೋದನೆ ಮುಗಿಲು ಮುಟ್ಟಿದೆ. ಸಂಕೇತ್ ಸಾವಿನ ಸುದ್ದಿಯಿಂದ ಇಡೀ ಕುಟುಂಬ ತೀವ್ರ ಆಘಾತದಲ್ಲಿದೆ.
📌 ಪೊಲೀಸ್ ಕಾರ್ಯಾಚರಣೆ ಹಾಗೂ ಭದ್ರತೆ:
ಮಾಹಿತಿ ತಿಳಿದ ಕೂಡಲೇ ತುಂಗಾ ನಗರ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಹಲ್ಲೆಗೈದು ಕೊಲೆಗೆ ಕಾರಣವಾದ ಏಳು ಜನ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಯಾವುದೇ ಕೋಮುಗಲಭೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮೆಗ್ಗಾನ್ ಜಿಲ್ಲಾಸ್ಪತ್ರೆ ಹಾಗೂ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
📌 ಶಾಸಕರ ಆಕ್ರೋಶ:
ಘಟನೆ ಬೆನ್ನಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಚನ್ನಬಸಪ್ಪ, ಗಾಯಾಳು ಗಿರೀಶ್ ಆರೋಗ್ಯ ವಿಚಾರಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಪೊಲೀಸ್ ಇಲಾಖೆ ಎಂದರೆ ಹಿಂದೂಗಳ ಹೆಣ ಹೊರುವ ಇಲಾಖೆಯಾಗಿದೆ. ಮತ್ತೆ ಹಿಂದೂಗಳ ಜೀವ ಹೋಗಿದೆ, ಇದಕ್ಕೆ ಹೊಣೆ ಯಾರು?” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಗಣೇಶ್ ರಿಪ್ಪನ್ ಪೇಟೆ