ಶಿವಮೊಗ್ಗ ಭದ್ರಾವತಿ ಬೈಪಾಸ್ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಬೈಕ್ ವೀಲಿಂಗ್ ಮಾಡಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೀಲಿಂಗ್ ಮಾಡುವ ಪುಂಡರನ್ನು ನೋಡಿ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ

.ದೂರುದಾರರ ಮಾಹಿತಿಯಂತೆ, ಹೊಂಡಾ ಆಕ್ಟಿವಾ ವಾಹನವನ್ನು ಬಳಸಿಕೊಂಡು ಕೆಲವು ಯುವಕರು ರಸ್ತೆಯಲ್ಲಿ ವೀಲಿಂಗ್ ಮಾಡುತ್ತಾ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದಾರೆ. ಈ ವೇಳೆ ಇತರ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವಕ್ಕೆ ಅಪಾಯ ಸಂಭವಿಸಬಹುದಾದ ಪರಿಸ್ಥಿತಿ ನಿರ್ಮಾಣವಾಗಿತ್ತು.ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೈಕ್ ಅನ್ನು ವಶಕ್ಕೆ ಪಡೆದಿರುತ್ತಾರೆ ಚಾಲನೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯುಂಟುಮಾಡಿದ ಆರೋಪದಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *