ಮಾರಕಸ್ತ್ರಗಳಿಂದ ಕೊಚ್ಚಿ ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಹಣಕಾಸು, ಆಸ್ತಿ ಮತ್ತು *** ಸಂಬಂಧಿತ ಕಾರಣಗಳಿಂದ ಈ ಹತ್ಯೆ ನಡೆದಿರಬಹುದೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಅವರ ಶವ ಪತ್ತೆಯಾಗಿದ್ದು, ಕಿತ್ತೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ತುಮಕೂರಿನಲ್ಲಿ ಹೋಂ ಕೇರ್ ನಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್ ಸುಮಾರು ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಕೊಲೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳು ಕಲ್ಮೇಶನನ್ನು ಮಾರಕಾಸ್ತ್ರಗಳಿಂದ ಕೊಚ್ಚಿಹತ್ಯೆಗೈದು ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.ಹತ್ತು ವರ್ಷಗಳ ಹಿಂದೆ ಕಲ್ಮೇಶ್ ಪತ್ನಿ ದೂರವಾಗಿದ್ದ ಕಾರಣ ತಮ್ಮ ವೃದ್ಧ ತಾಯಿಯೊಂದಿಗೆ ವಾಸವಿದ್ದರು. ಘಟನೆ ತಿಳಿದ ತಕ್ಷಣ ಪತ್ನಿ ಹಾಗೂ ಪುತ್ರ ಗ್ರಾಮಕ್ಕೆ ಆಗಮಿಸಿದ್ದಾರೆ ಪ್ರಕಟ ಸಂಬಂಧ ಎಸ್ ಪಿ ರಾಮರಾಜನ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲ್ ನಡೆಸಿದ್ದಾರೆ ಹಣಕಾಸು ಆಸ್ತಿ ಹಾಗೂ ಮಹಿಳೆ ಸಂಬಂಧಿತ ವಿಚಾರಗಳಿಗೆ ಕೊಲೆ ಆಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ

ವರದಿ: ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *