ರಿಪ್ಪನ್‌ಪೇಟೆ : 2025–26ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಗಳು ರಾಜ್ಯಾದ್ಯಂತ ಫೆಬ್ರವರಿ 28ರಿಂದ ಆರಂಭವಾಗಲಿದ್ದು, ರಿಪ್ಪನ್‌ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 267 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇವರಲ್ಲಿ 242 ಮಂದಿ ಹೊಸಬರು, 17 ಮಂದಿ ಪುನರಾವರ್ತಿತರು ಹಾಗೂ 7 ಮಂದಿ ಖಾಸಗಿ ಅಭ್ಯರ್ಥಿಗಳು ಸೇರಿದ್ದಾರೆ.ಈ ಕುರಿತು ಪರೀಕ್ಷಾ ಮುಖ್ಯ ಅಧೀಕ್ಷಕ ಆರ್. ಅರುಣ್‌ಕುಮಾರ್ ಮಾಹಿತಿ ನೀಡಿ, ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾಲೇಜಿನಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಫೆಬ್ರವರಿ 28ರಿಂದ ಆರಂಭವಾಗುವ ಪರೀಕ್ಷೆಗಳು ಮಾರ್ಚ್ 16ರವರೆಗೆ ನಡೆಯಲಿವೆ ಎಂದು ವಿವರಿಸಿದರು.ಪರೀಕ್ಷಾ ಕೇಂದ್ರದಲ್ಲಿ ಒಟ್ಟು 9 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ಕ್ರಮಬದ್ಧವಾಗಿ ವ್ಯವಸ್ಥೆಗೊಳಿಸಲಾಗಿದೆ. ಎಲ್ಲಾ ಕೊಠಡಿಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪಾರದರ್ಶಕ ಮತ್ತು ಶಿಸ್ತುಬದ್ಧ ಪರೀಕ್ಷಾ ವಾತಾವರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು. ಸಾರ್ವಜನಿಕರು ಅನಾವಶ್ಯಕವಾಗಿ ಪರೀಕ್ಷಾ ಕೇಂದ್ರದ ಬಳಿ ಓಡಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅಧೀಕ್ಷಕರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಕೃಷ್ಣಮೂರ್ತಿ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

ವರದಿ : ಅಂಜನ್ ಕೆರೆಹಳ್ಳಿ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *