ರಿಪ್ಪನ್ ಪೇಟೆ: ಮಾನಸಿಕ ಒತ್ತಡದಿಂದ ಯುವಕನೊಬ್ಬ ಕಳೆನಾಶಕ ಸೇವಿಸಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ದುರ್ಘಟನೆ ನಡೆದಿದೆ.
ಮೃತ ಯುವಕನನ್ನು ರಿಪ್ಪನ್ ಪೇಟೆ ಸಮೀಪದ ಕಗ್ಗಲಿ . ರಾಕೇಶ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳಿಂದ ಮಾನಸಿಕವಾಗಿ ಒತ್ತಡದಲ್ಲಿದ್ದರೆಂದು ತಿಳಿದುಬಂದಿದೆ. ಫೆಬ್ರವರಿ 24 ರಂದು ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ್ದಾರೆ ತಕ್ಷಣವೇ ರಿಪ್ಪನ್ ಪೇಟೆಯ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಿ . ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಾರ್ಚ್ 2 ರ ರಾತ್ರಿ ಕೊನೆಯುಸಿರೆಳೆದಿದ್ದಾರೆ


ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಘಟನೆ ಕುಟುಂಬಸ್ಥರು ಮತ್ತು ಅಪಾರ ಸ್ನೇಹಿತರಲ್ಲಿ ದುಃಖದ ವಾತಾವರಣವನ್ನು ನಿರ್ಮಿಸಿದೆ.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *