ರಿಪ್ಪನ್ ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ಬೆಕ್ಕು ಅಡ್ಡ ಬಂದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಕೆರೆಹಳ್ಳಿ ನಿವಾಸಿ ಮಂಜುನಾಥ್ (32) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ರಿಪ್ಪನ್ ಪೇಟೆ ಯಿಂದ. ಕೆರೆಹಳ್ಳಿ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಸಾಗರ ರಸ್ತೆಯ ಕೆಇಬಿ ಕಚೇರಿ ಎದುರು ಏಕಾಏಕಿ ಬೆಕ್ಕು ಡಿವೈಡರ್ ನಿಂದ ರಸ್ತೆಗೆ ದಾಟಿದ್ದು ಬೆಕ್ಕನು ಉಳಿಸುವ ಸಲುವಾಗಿ ಮಂಜುನಾಥ್ ರವರು ಚಾಲನೆ ಮಾಡುತಿದ್ದ . ಬೈಕ್ ಬ್ರೇಕ್ ಹಾಕಿದ್ದು . ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಗೆ ರವಾನಿಸಿದರು. ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು . ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲು ಸಲಹೆ ನೀಡಿದರು. ಆದರೆ ಮಣಿಪಾಲ್‌ಗೆ ಕರೆದೊಯ್ಯುವಷ್ಟರಲ್ಲಿ ಮಂಜುನಾಥ್ ಅವರು ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.
ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

ವರದಿ:ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *