ತೀರ್ಥಹಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲ ವಿಷಯಗಳನ್ನು ಪ್ರಕಟಿಸಿರುವ ಆರೋಪದ ಮೇಲೆ ಬಿಂದು ಸಿರ ಅಲಿಯಾಸ್ ಬಿಂದು ಗೌಡ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ

Malnadsuddi

ಎಂದು ಬಿಜೆಪಿ ಯುವ ಮೋರ್ಚಾ ತಿಳಿಸಿದೆ.ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ದೇವಾಡಿಗ ಅವರು ನೀಡಿದ ಮಾಹಿತಿಯ ಪ್ರಕಾರ, ಆರೋಪಿತರು ದೇಶದ ಪ್ರಧಾನಿಯವರ ಚಿತ್ರವನ್ನು ಬಳಸಿ ಅವಮಾನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು, ಸಮಾಜದಲ್ಲಿ ಗೌರವ ಹೊಂದಿರುವ ವ್ಯಕ್ತಿಗಳು ಹಾಗೂ ದೇಶದ ಸಂಸ್ಕೃತಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಇದುವರೆಗೆ ಆರೋಪಿತೆಯ ವಿರುದ್ಧ ಕರ್ನಾಟಕದಲ್ಲಿ ಇದು ಎರಡನೇ ಎಫ್‌ಐಆರ್ ಆಗಿದ್ದು, ಮೊದಲ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಗಿರುವುದಾಗಿ ತಿಳಿಸಲಾಗಿದೆ

.ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮಹಾಂತ್ ಗೌಡ ಹಾಗೂ ಪ್ರದೀಪ್ ಗಬಡಿ ಸಹ ದೂರು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.“ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಅಶ್ಲೀಲ ಹಾಗೂ ಅವಹೇಳನಕಾರಿ ವಿಷಯಗಳನ್ನು ಹರಡುವುದು ಕಾನೂನುಬಾಹಿರ. ಇಂತಹ ನಡೆಗೆ ತಕ್ಕ ಕಾನೂನು ಕ್ರಮ ಕೈಗೊಳ್ಳಲೇಬೇಕು,” ಎಂದು ಯುವ ಮೋರ್ಚಾ ಪ್ರಕಟಣೆಯಲ್ಲಿ ಹೇಳಿದೆ.ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವರದಿ :ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *