ಚಿಕ್ಕಮಗಳೂರು : ಮರ್ಚಂಟ್ ನೇವಿಯಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ಯುವಕನೊಬ್ಬ ಇರಾನ್‌ನಲ್ಲಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.


ಕೊಪ್ಪ ತಾಲ್ಲೂಕಿನ ಹಿರೆಕೊಡಿಗೆ ಗ್ರಾಮದ ನಿವಾಸಿ ನಿಶ್ಚಿತ್ ಎಂಬ ಯುವಕ ಮರ್ಚಂಟ್ ನೇವಿಯಲ್ಲಿ ಕೆಲಸ ಮಾಡುತ್ತಿದ್ದು, ಉದ್ಯೋಗದ ನಿಮಿತ್ತ ವಿದೇಶದಲ್ಲಿದ್ದನು. ಸುಮಾರು 8 ದಿನಗಳ ಹಿಂದೆ ತಂದೆಗೆ ದೂರವಾಣಿ ಕರೆ ಮಾಡಿದ್ದ ನಿಶ್ಚಿತ್, ತಾನು ಕುವೈತ್‌ಗೆ ಹೋಗುತ್ತಿರುವುದಾಗಿ ತಿಳಿಸಿದ್ದನು. ಆದರೆ ಅದಾದ ಬಳಿಕದಿಂದ ಆತ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಗನೊಂದಿಗೆ ಸಂಪರ್ಕ ಸಾಧ್ಯವಾಗದೆ ಪೋಷಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಿಶ್ಚಿತ್ ಅವರನ್ನು ಶೀಘ್ರ ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಶ್ಚಿತ್ ತಂದೆ ಮನವಿ ಮಾಡಿದ್ದಾರೆ.
ಇದೀಗ ಯುವಕನ ಪತ್ತೆಗೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *