ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಡದಿ ಪೊಲೀಸ್ ಠಾಣೆಯಲ್ಲಿ 04-03-2026 ರಂದು ಪ್ರಕರಣ ದಾಖಲಾಗಿದ್ದು, ಎನ್‌ಡಿಪಿಎಸ್ (Narcotic Drugs & Psychotropic Substances) ಕಾಯ್ದೆ 1985ರ ಸೆಕ್ಷನ್ 8(c), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಬಿಡದಿ ಸಮೀಪದ ಶ್ಯಾನಮಂಗಲ ಗ್ರಾಮದಲ್ಲಿರುವ ಅನಿಲ್‌ಕುಮಾರ್ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಸ್ಥಳದಿಂದ ಒಟ್ಟು ಸುಮಾರು 1796 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಇಲೆಕ್ಟ್ರಾನಿಕ್ ತೂಕ ಮಾಪಕ, ಪ್ಲಾಸ್ಟಿಕ್ ಬ್ಯಾಗ್‌ಗಳು ಹಾಗೂ ನಗದು ಹಣ ಸಹ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 3,10,000 ರೂ. ಎಂದು ಅಂದಾಜಿಸಲಾಗಿದೆ.
ಬಂಧಿತರನ್ನು ಶ್ರೀ ಚೇತನ (30), ಶಶಿಕುಮಾರ್ (33) ಎಂದು ಗುರುತಿಸಲಾಗಿದೆ. ಇಬ್ಬರೂ ರಾಮನಗರ ಜಿಲ್ಲೆಯ ನಿವಾಸಿಗಳಾಗಿದ್ದಾರೆ.

ಪಿಎಸ್ಐ ದೇವರಾಜ ಹಾಗೂ ಅವರ ತಂಡ ಮಿಂಚಿನ ಕಾರ್ಯಾಚರಣೆ ಯಲ್ಲಿ ಠಾಣೆಯ ಸಿಬ್ಬಂದಿಗಳು
ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ಕುರಿತು ಬಿಡದಿ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.

ವರದಿ: ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *