ಸಾಗರ: ರೈಲು ಹಳಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಮೃತರನ್ನು ಸಾಗರ ನಗರದ ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ.ಲಭ್ಯವಿರುವ ಮಾಹಿತಿಯ ಪ್ರಕಾರ, ನಿತಿನ್ ಅವರು ಸಾಗರದ ದಿನಸಿ ವ್ಯಾಪಾರಿ ಆರ್.ಕೆ. ನಾಗರಾಜ್ ಅವರ ಪುತ್ರರಾಗಿದ್ದು, ಉದ್ಯಮಿ ಬೆಲ್ಲದ ಕೃಷ್ಣಪ್ಪ ಅವರ ಮೊಮ್ಮಗನಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆಗೆ ಮೈಸೂರಿನಿಂದ ತಾಳಗುಪ್ಪ ಕಡೆಗೆ ಸಂಚರಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ರುಂಡ ಹಾಗೂ ದೇಹ ಹಳಿಯ ಪಕ್ಕದಲ್ಲೇ ಬಿದ್ದಿದೆ. ಎಂದು ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. .ಯುವಕ ಈ ತೀವ್ರ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ…..

ವರದಿ :ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *