ಶಿವಮೊಗ್ಗ: ಖಾಸಗಿ ವೀಡಿಯೋವನ್ನು ನಕಲಿ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿ ವ್ಯಕ್ತಿಯ ಮಾನಹಾನಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 05-02-2026 ರಂದು ಪೀಡಿತರೊಬ್ಬರು ತಮ್ಮ ಖಾಸಗಿ ವೀಡಿಯೋವನ್ನು ಅಪರಿಚಿತರು ನಕಲಿ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿರುವ ಬಗ್ಗೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 20/2026ರಂತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 67 ಮತ್ತು 67(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖೀಲ್ ಬಿ. (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ ಮತ್ತು ರಮೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ತನಿಖೆ ನಡೆಸಿದ ತಂಡವು ಪ್ರಕರಣದ ಆರೋಪಿಗಳಾದ ಸೀಮ ಜೂಲಿಯನ್ ಸೆರಾವೋ (45), ಬ್ಯೂಟೀಷಿಯನ್, ನಿವಾಸ: ಗಣಪತಿ ದೇವಸ್ಥಾನದ ಹತ್ತಿರ, ಹೊಸನಗರ ತಾಲ್ಲೂಕು, ಶಿವಮೊಗ್ಗ ಹಾಗೂ ಸಿ.ಜೆ. ನಿಶಾಂತ್ (29), ವ್ಯವಹಾರ ವೃತ್ತಿ, ನಿವಾಸ: ಟಾಟ ನ್ಯೂ ಹೆವನ್ ಅಪಾರ್ಟ್ಮೆಂಟ್, ಹುಸ್ಕೂರು ಮುಖ್ಯ ರಸ್ತೆ, ದಾಸನಪುರ, ಬೆಂಗಳೂರು ಇವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂಚನೆ: ಯಾವುದೇ ವ್ಯಕ್ತಿಯ ಮಾನಕ್ಕೆ ಧಕ್ಕೆ ತರುವ ಫೋಟೋ, ವೀಡಿಯೋ ಅಥವಾ ಇತರೆ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ವರದಿ:ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *