ರಿಪ್ಪನಪೇಟೆ: ಮಾಜಿ ಸಚಿವರು ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ರಿಪ್ಪನಪೇಟೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಅವರು ಸ್ಥಳೀಯರೊಂದಿಗೆ ಭೇಟಿ ಮಾಡಿ ಆಶೀರ್ವಾದ ಸ್ವೀಕರಿಸಿದರು.
ರಿಪ್ಪನಪೇಟೆಯಲ್ಲಿ ಸ್ವಲ್ಪ ಸಮಯ ಕಳೆದ ನಂತರ, ಅವರು ಬೆಳ್ಳೂರು ಗ್ರಾಮಕ್ಕೆ ತೆರಳಿದರು. ಈ ವೇಳೆ ಹಲವಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಹಾಲಪ್ಪ ಅವರ ಆಗಮನದಿಂದ ರಿಪ್ಪನಪೇಟೆ ಪ್ರದೇಶದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *