ಬೆಳಗಾವಿ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ಹೆರಾಯಿನ್ ವಶಪಡಿಸಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಾರ್ಚ್ 6 ರಂದು ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಯೂರ ಸುಭಾಷ್ ರಾವತ್ (31) ಮತ್ತು ರಾಹುಲ್ ಸಂಜಯ ಜಾಲಾಗರ್ (30) ಎಂದು ಗುರುತಿಸಲಾಗಿದೆ.


ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಆರೋಪಿಗಳ ಬಳಿಯಲ್ಲಿ ಬ್ರೌನ್ ಬಣ್ಣದ ಹೆರಾಯಿನ್ ಪೌಡರ್ ಒಟ್ಟು ಸುಮಾರು 12.96 ಗ್ರಾಂ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ ಸುಮಾರು ₹25,400 ಎಂದು ತಿಳಿದುಬಂದಿದೆ. ಜೊತೆಗೆ ಹೆರಾಯಿನ್ ಪ್ಯಾಕ್ ಮಾಡಲು ಬಳಸಿದ್ದ ಕಾಗದದ ಚೂರುಗಳು ಮತ್ತು ಪ್ಲಾಸ್ಟಿಕ್ ಕವರ್‌ಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬೆಳಗಾವಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ 21(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ :ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *