
ವೈಯಕ್ತಿಕ ವಿಚಾರಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ
ರಿಪ್ಪನಪೇಟೆ: ವೈಯಕ್ತಿಕ ಕಾರಣಗಳಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ರಿಪ್ಪನಪೇಟೆ ಸಮೀಪದ ಗಂದರಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಶ್ರೀಜಿತ್ (26) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪದಿಂದ ಬೇಸತ್ತು ಅವರು ಈ ದಾರುಣ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿದ ಕೂಡಲೇ ಸ್ಥಳೀಯರು ಹಾಗೂ ಕುಟುಂಬಸ್ಥರು ದುಃಖ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಯುವಕನ ಅಕಾಲಿಕ ಮರಣದಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ
ವರದಿ : ಗಣೇಶ್ ರಿಪ್ಪನ್ ಪೇಟೆ