ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ.
ಮೃತ ಬಾಲಕನನ್ನು ಬಾಜೋಳಗಾ ಗ್ರಾಮದ ಶೋಹಮ್ (13) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಬಾಜೋಳಗಾ ಕ್ರಾಸ್‌ನಿಂದ ಡೀಸೆಲ್ ತುಂಬಿಸಲು ತೆರಳುತ್ತಿದ್ದ ಟ್ರ್ಯಾಕ್ಟರ್ ಮೇಲೆ ಶೋಹಮ್ ಕುಳಿತಿದ್ದನು. ಮದಕಟ್ಟಿ ಕ್ರಾಸ್ ಬಳಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಶೋಹಮ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಖಟಕ್ ಚಿಂಚೋಳಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ: ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *