
Just this week, police arrested a 33-year-old fashion designer, Deepa Avatagi. She allegedly used social media to befriend wealthy men, lured them to hotels, and then locked them in bathrooms to steal their belongings (including cars and cash) before blackmailing them.

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮಹಿಳೆಯನ್ನು ಬೆಳಗಾವಿ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಆಕೆಯ ಸ್ನೇಹಿತ ಶಿವಾನಂದ ಮಠಪತಿ ಎಂಬಾತ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಶಿವಾನಂದ ಮಠಪತಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿ ಎಂದು ತಿಳಿದುಬಂದಿದೆ.ಪೊಲೀಸರ ಮಾಹಿತಿ ಪ್ರಕಾರ, ಶಿವಾನಂದ ಶ್ರೀಮಂತ ವ್ಯಕ್ತಿಗಳ ಮಾಹಿತಿ ದೀಪಾಳಿಗೆ ನೀಡುತ್ತಿದ್ದನು. ಬಳಿಕ ದೀಪಾ ಫೇಸ್ಬುಕ್ ಹಾಗೂ ಇನ್‌ಸ್ಟಾಗ್ರಾಂ ಮೂಲಕ ಅವರನ್ನು ಸಂಪರ್ಕಿಸಿ ಪರಿಚಯ ಬೆಳೆಸಿಕೊಂಡು ತನ್ನ ಬಲೆಗೆ ಬೀಳಿಸುತ್ತಿದ್ದಳು. ನಂತರ ಅಶ್ಲೀಲ ಚಾಟ್ ಮತ್ತು ಫೋನ್ ಸಂಭಾಷಣೆಗಳ ಮೂಲಕ ಅವರನ್ನು ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು.ಲಾಡ್ಜ್‌ಗೆ ಬಂದ ಬಳಿಕ ವ್ಯಕ್ತಿಗಳಿಗೆ ಸ್ನಾನ ಮಾಡಿ ಬರಲು ಹೇಳಿ, ಅವರು ಬಾತ್‌ರೂಮ್‌ಗೆ ಹೋಗಿದಾಗ ಹೊರಗಿನಿಂದ ಬಾಗಿಲು ಹಾಕಿ ಲಾಕ್ ಮಾಡುತ್ತಿದ್ದಳು. ಬಳಿಕ ಅವರ ಮೊಬೈಲ್ ಫೋನ್, ಹಣ ಹಾಗೂ ಕಾರಿನ ಕೀಲಿಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗುತ್ತಿದ್ದಳು. ನಂತರ ಬೇರೆ ನಂಬರಗಳಿಂದ ಕರೆ ಮಾಡಿ ಬ್ಲ್ಯಾಕ್‌ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಳು ಎಂದು ತಿಳಿದುಬಂದಿದೆ.ಹನಿಟ್ರ್ಯಾಪ್‌ಗೆ ಬಿದ್ದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‌ಪೆಕ್ಟರ್ ಪರಶುರಾಮ ಪೂಜೇರಿ ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸಿ ದೀಪಾಳನ್ನು ಬಂಧಿಸಿದೆ.ಬಂಧಿತೆಯಿಂದ ಒಟ್ಟು 32.86 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ ಫಾರ್ಚುನರ್ ಕಾರು, ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂ. ನಗದು ಸೇರಿವೆ. ಪರಾರಿಯಾದ ಮತ್ತೊಬ್ಬ ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.
ವರದಿ : ಗಣೇಶ್ ರಿಪ್ಪನ್ ಪೇಟೆ