ಚಿನ್ನ ಕಳವು ಆರೋಪಿ ಬಂಧನ 30 ಗ್ರಾಂ ಚಿನ್ನದ ಗಟ್ಟಿ ಪೊಲೀಸರ ವಶಕ್ಕೆ

Posted by

The Harohalli Police have successfully cracked a house burglary case reported in Chikkareddoddi, arresting one individual and recovering gold worth approximately ₹4 Lakhs.

ರಾಮನಗರ: ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳವುಗೊಂಡಿದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಡಿಸೆಂಬರ್ 13ರಂದು ಚಿಕ್ಕರೆಡ್ಡೊಡ್ಡಿ ಆದಿಶಕ್ತಿ ಬಡಾವಣೆಯ ಮನೆಯೊಂದರಲ್ಲಿ ಬಾಗಿಲು ಮೀಟಿ ಒಳನುಗ್ಗಿದ ಕಳ್ಳನು ಮನೆಯಲ್ಲಿದ್ದ ಚಿನ್ನದ ಚೈನ್ ಕಳವು ಮಾಡಿಕೊಂಡು ಪರಾರಿಯಾಗಿದ್ದನು. ಈ ಸಂಬಂಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊ.ಸಂ: 337/2025ರಂತೆ BNS ಕಲಂ 331(3), 305 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯ ಕುರಿತು ಮಾಹಿತಿ ಸಂಗ್ರಹಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಕಳವು ಮಾಡಿದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು. ವಿಚಾರಣೆ ವೇಳೆ ಆರೋಪಿ ಕಳವು ಮಾಡಿದ ಚಿನ್ನವನ್ನು ಗಟ್ಟೆಯಾಗಿ ಕರಗಿಸಿಕೊಂಡಿರುವುದಾಗಿ ತಿಳಿಸಿದ್ದಾನೆ.


ಆರೋಪಿಯಿಂದ ಸುಮಾರು 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಗಟ್ಟೆ ವಶಪಡಿಸಿಕೊಳ್ಳಲಾಗಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರೆಸಿದ್ದಾರೆ.

ವರದಿ:ಅಂಜನ್ ಕೆರೆಹಳ್ಳಿ

Leave a Reply

Your email address will not be published. Required fields are marked *