
Shivamogga: Kuruvalli Nagaraj has been appointed as the General Secretary of the Shivamogga District Congress Backward Classes (Youth Wing) unit.
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಯುವ ಸಂಘಟನೆ) ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಡಿಸಿಸಿ ಬ್ಯಾಂಕ್ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥ ಗೌಡ ಅವರ ಆಪ್ತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಕುರುವಳ್ಳಿ ನಾಗರಾಜ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.

ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಶಂಕರಘಟ್ಟ ಅವರು ಕುರುವಳ್ಳಿ ನಾಗರಾಜ್ ಅವರ ನೇಮಕಾತಿಯನ್ನು ಪ್ರಕಟಿಸಿದ್ದಾರೆ.
ಪ್ರಸ್ತುತ ತೀರ್ಥಹಳ್ಳಿ ಆರ್ಯ ಈಡಿಗ ಸಂಘದ ನಿರ್ದೇಶಕರಾಗಿರುವ ಕುರುವಳ್ಳಿ ನಾಗರಾಜ್ ಅವರು ತೀರ್ಥಹಳ್ಳಿ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷರಾಗಿಯೂ ಹಾಗೂ ತಾಲ್ಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಸಾಮಾಜಿಕ ಮತ್ತು ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಈ ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಅವರ ಆಪ್ತರು ಸಂತೋಷ ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಹಕಾರ :ಸಾನಿಧ್ಯ ನ್ಯೂಸ್ ಆಫ್ ಕರ್ನಾಟಕ
ವರದಿ : ಗಣೇಶ್ ರಿಪ್ಪನ್ ಪೇಟೆ