Despite the government releasing funds for the construction of a well in Kudumallige Gram Panchayat limits of Thirthahalli taluk, money has been collected from the villagers

ತೀರ್ಥಹಳ್ಳಿ : ತಾಲೂಕಿನ ಕುಡುಮಲ್ಲಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾವಿ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದರೂ ಸಹ, ಗ್ರಾಮಸ್ಥರಿಂದ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಗ್ರಾಮಸ್ಥರ ಹೇಳಿಕೆಯ ಪ್ರಕಾರ, ಬಾವಿ ನಿರ್ಮಾಣಕ್ಕೆ ಸರ್ಕಾರದಿಂದಲೇ ಅನುದಾನ 109534 ದೊರೆತ್ತಿದ್ದರೂ ಕೂಡ ಕೆಲವು ಅಧಿಕಾರಿಗಳು ಹಾಗೂ ಸಂಬಂಧಪಟ್ಟವರು ಗ್ರಾಮಸ್ಥರಿಂದ ಹೆಚ್ಚುವರಿ 60000 ಹಣವನ್ನು ಕೇಳಿ ವಸೂಲಿ ಮಾಡುತ್ತಿರುವುದಾಗಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ.ಈ ವಿಷಯದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ಅನುದಾನ ಇದ್ದರೂ ಗ್ರಾಮಸ್ಥರಿಂದ ಹಣ ವಸೂಲಿ ಮಾಡಿರುವವರ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು .ಹಾಗೂ ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷರು ತುಪ್ಪದ ಮನೆ ವಿನಾಯಕ ರವರು ಆಗ್ರಹಿಸಿದ್ದಾರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ಈ ರೀತಿಯ ಅಕ್ರಮಗಳ ಬಗ್ಗೆ ಮೇಲಾಧಿಕಾರಿಗಳು ಪರಿಶೀಲನೆ ನಡೆಸಿ, ಸತ್ಯಾಸತ್ಯತೆ ಹೊರತೆಗೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ : ಗಣೇಶ್ ರಿಪ್ಪನ್ ಪೇಟೆ