ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಬಳಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಪುಡಿಪುಡಿಯಾಗಿದ್ದು, ಗಾಜುಗಳು ಚೂರುಚೂರಾಗಿವೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಬಳಿಕ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *