ರಾಜ್ಯ ಅಡಿಕೆ ಮಹಾಮಂಡಳದ ಅಧ್ಯಕ್ಷರಾಗಿ ಆರಗ ಜ್ಞಾನೇಂದ್ರ ಅಧಿಕಾರ ಸ್ವೀಕಾರರಾಜ್ಯದ ಎಲ್ಲಾ ಅಡಿಕೆ ಸಹಕಾರ ಸಂಘಗಳನ್ನು ಒಳಗೊಂಡಿರುವ ರಾಜ್ಯ ಅಡಿಕೆ ಮಹಾಮಂಡಳದ ಅಧ್ಯಕ್ಷರಾಗಿ ಆರಗ ಜ್ಞಾನೇಂದ್ರ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಮಹಾಮಂಡಳದ ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಅವರು ಕೂಡ ಇದೇ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದರು.ಈ ಕಾರ್ಯಕ್ರಮದಲ್ಲಿ ರಾಜ್ಯ ಅಡಿಕೆ ಮಹಾಮಂಡಳದ ಎಲ್ಲಾ ನಿರ್ದೇಶಕರು ಹಾಜರಿದ್ದು, ನೂತನ ಅಧ್ಯಕ್ಷರಾದ ಆರಗ ಜ್ಞಾನೇಂದ್ರ ಹಾಗೂ ಉಪಾಧ್ಯಕ್ಷರಾದ ಸೂರ್ಯನಾರಾಯಣ ಅವರಿಗೆ ಅಭಿನಂದನೆ ಸಲ್ಲಿಸಿದರು.ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವ ದಿಸೆಯಲ್ಲಿ ಮಹಾಮಂಡಳ ಇನ್ನಷ್ಟು ಪರಿಣಾಮಕಾರಿ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಮಹಾಮಂಡಳದ ನಿರ್ದೇಶಕರು ಮತ್ತು ಸದಸ್ಯರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.

ವರದಿ : ಕೆರೆಹಳ್ಳಿ ಅಂಜನ್

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *