ಚಿತ್ರದುರ್ಗ : ಜಿಲ್ಲೆಯ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗೆರೆ ಗೇಟ್ ಬಳಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು (RSI) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಂಗಳೂರಿನಿಂದ ಬಳ್ಳಾರಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು RSI ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ RSI ಮಹಾಂತೇಶ್ ಹಾಗೂ ಸಿವಿಲ್ PSI ಈಶ್ವರ್ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ (SP) ರಂಜಿತ್ ಕುಮಾರ ಬಂಡಾರು ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, “ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಮೂವರು RSI ಗಳು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.ಈ ಕುರಿತು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *