ಶಿವಮೊಗ್ಗ : ಮಾದಕ ದ್ರವ್ಯಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾರ್ಚ್ 14, 2026ರಂದು ರಾತ್ರಿ ಅನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೊರವಲಯದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳನ್ನು ಬಂಧಿಸಿ ಪರಿಶೀಲನೆ ನಡೆಸಿದಾಗ ಅವರಿಂದ ಸುಮಾರು 1 ಕೆಜಿ 132 ಗ್ರಾಂ ಗಾಂಜಾ ಪತ್ತೆಯಾಗಿದೆ.
ಬಂಧಿತರಿಂದ ಸುಮಾರು ₹45,000 ಮೌಲ್ಯದ ಗಾಂಜಾ ಹಾಗೂ ₹550 ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಅನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಅನವಟ್ಟಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *