ಚಾಮರಾಜ ನಗರ : ಸ್ನೇಹಿತನ ಸಹೋದರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಯುವಕನೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೊಡ್ಡಕೆರೆ ಏರಿ ಬಳಿ ನಡೆದಿದೆ.ಮೃತರನ್ನು ಮೂಖಹಳ್ಳಿ ಗ್ರಾಮದ 23 ವರ್ಷದ ನಂಜುಂಡಸ್ವಾಮಿ ಎಂದು ಗುರುತಿಸಲಾಗಿದೆ. ಪಾರ್ಟಿಗೆಂದು ಸ್ನೇಹಿತ ಅಜಯ್ ಜೊತೆಗೆ ತೆರಳಿದ್ದ ನಂಜುಂಡಸ್ವಾಮಿ, ಬಳಿಕ ಕತ್ತು ಸೀಳಲ್ಪಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು.ಘಟನೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ಅಜಯ್ ಅನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.ನಂಜುಂಡಸ್ವಾಮಿ ತನ್ನ ಸಹೋದರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ತಿಳಿದು ಕೋಪಗೊಂಡ ಅಜಯ್, ಆತನನ್ನು ಕೊಲೆ ಮಾಡುವ ನಿರ್ಧಾರಕ್ಕೆ ಬಂದಿದ್ದಾನೆ. ಈ ವಿಷಯವಾಗಿ ಕುಟುಂಬದಲ್ಲಿ ಹಿಂದೆಯೇ ಜಗಳ ನಡೆದಿತ್ತು ಎನ್ನಲಾಗಿದೆ.ಹತ್ಯೆ ನಡೆಸಲು ಯೋಜನೆ ರೂಪಿಸಿದ್ದ ಅಜಯ್, ನಂಜುಂಡಸ್ವಾಮಿಯನ್ನು ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ, ನಂತರ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ.ಸದ್ಯ ಪ್ರಕರಣ ಸಂಬಂಧ ಪೊಲೀಸರು ಅಜಯ್ ಅನ್ನು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *