ರಿಪ್ಪನಪೇಟೆ: ಸಮೀಪದ ಗರ್ತಿಕೆರೆ ಬಳಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೈಕ್ ಚಾಲಕ ಹೊಳೆಕೇವಿ ರಾಜು ಸುಮಾರು (30)ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿ ಕಡೆಯಿಂದ ಬಂದ ಕಾರು ಹಾಗೂ ಅದೇ ದಿಕ್ಕಿನಿಂದ ಬಂದ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಚಾಲಕ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ.
ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ :ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *