ಅಕ್ರಮ ಗಾಂಜಾ ಮಾರಾಟ: ವ್ಯಕ್ತಿ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಸಮೀಪ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತನನ್ನು ಇಂದೂರು ಗ್ರಾಮದ ಕುನ್ನೂರ ಓಣಿಯ ನಿವಾಸಿ ಅಕ್ಷರ ಮೌಲಾಸಾಬ ಸೈಯದ್‌ಅಲಿ (32) ಎಂದು ಗುರುತಿಸಲಾಗಿದೆ. ಈತನು ಶಿರಸಿ–ಹುಬ್ಬಳ್ಳಿ ಮಾರ್ಗದ ರಾಜ್ಯ ಹೆದ್ದಾರಿ-69ರ ಬಸ್ ಡಿಪೋ ಬಳಿ ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಗಾಂಜಾ ಇಟ್ಟುಕೊಂಡು ಗ್ರಾಹಕರಿಗಾಗಿ ಕಾಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.ದಾಳಿಯ ವೇಳೆ ಸುಮಾರು ₹12,000 ಮೌಲ್ಯದ 184 ಗ್ರಾಂ ಗಾಂಜಾ ಹಾಗೂ ಆರೋಪಿಯ ಬಳಿಯಿದ್ದ ₹360 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ ಹಾಗೂ ಶಿರಸಿ ಡಿ.ಎಸ್.ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.ಮುಂಡಗೋಡ ಪೊಲೀಸ್ ಇನ್ಸ್‌ಪೆಕ್ಟರ್ ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ ಪಿ.ಎಸ್.ಐ ಮಂಜುನಾಥ ಗೌಡರ, ಎ.ಎಸ್.ಐ ಸೋಮಶೇಖರ ಮೇತ್ರಿ ಹಾಗೂ ಸಿಬ್ಬಂದಿಗಳಾದ ಕೋಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ಮಹಾಂತೇಶ ಮುಧೋಳ, ನಾಗಪ್ಪ ಮೊರಟಗಿ ಮತ್ತು ಬಸವರಾಜ ಒಡೆಯರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

  • Anjan Kerehalli

    ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

    Related Posts

    ಉಡಾನ್ 6.0 ಟೆಂಡರ್‌ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸೇರ್ಪಡೆ.!

    ಶಿವಮೊಗ್ಗ: ಮಲೆನಾಡಿನ ಜನರ ಬಹುದಿನಗಳ ನಿರೀಕ್ಷೆಗೆ ಮತ್ತೊಮ್ಮೆ ಬಲ ಬಂದಿದ್ದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಾದೇಶಿಕ ವಿಮಾನಯಾನ ಯೋಜನೆಯಾದ ಉಡಾನ್ 6.0 ಟೆಂಡರ್ ಪ್ರಕ್ರಿಯೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸೇರ್ಪಡೆಯಾಗಿದೆ. ಇದರಿಂದ ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜನರಿಗೆ ಮುಂದಿನ ದಿನಗಳಲ್ಲಿ…

    ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂಕಪಟ್ಟಿ ಗೊಂದಲ, ಪರೀಕ್ಷಾ ವಿಳಂಬ; ವಿದ್ಯಾರ್ಥಿಗಳ ಸಮಸ್ಯೆ ಖಂಡಿಸಿ ನ.30ಕ್ಕೆ ಬಿಜೆಪಿ ಪ್ರತಿಭಟನೆ – ಕುಕ್ಕೆ ಪ್ರಶಾಂತ್

    ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂಕಪಟ್ಟಿ ವಿತರಣೆಯಲ್ಲಿನ ಗೊಂದಲ, ಪರೀಕ್ಷೆಗಳ ವಿಳಂಬ, ಮೌಲ್ಯಮಾಪನದಲ್ಲಿನ ಲೋಪ ಸೇರಿದಂತೆ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಖಂಡಿಸಿ ನವೆಂಬರ್ 30ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ…

    Leave a Reply

    Your email address will not be published. Required fields are marked *

    You Missed

    ಉಡಾನ್ 6.0 ಟೆಂಡರ್‌ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸೇರ್ಪಡೆ.!

    ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂಕಪಟ್ಟಿ ಗೊಂದಲ, ಪರೀಕ್ಷಾ ವಿಳಂಬ; ವಿದ್ಯಾರ್ಥಿಗಳ ಸಮಸ್ಯೆ ಖಂಡಿಸಿ ನ.30ಕ್ಕೆ ಬಿಜೆಪಿ ಪ್ರತಿಭಟನೆ – ಕುಕ್ಕೆ ಪ್ರಶಾಂತ್

    ತಮಿಳಿನ ಜನಪ್ರಿಯ ‘ಸೂಪರ್ ಸಿಂಗರ್’ ವೇದಿಕೆಗೆ ಹೊಸನಗರದ ಅಭಿಜಿತ್ ರಾವ್ ಆಯ್ಕೆ!

    ಮುಖ್ಯ ಸಚೇತಕರಾಗಿ ಆಯ್ಕೆಯಾದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಅಭಿನಂದನೆಗಳ ಮಹಾಪೂರ…!

    ಮುಖ್ಯ ಸಚೇತಕರಾಗಿ ಆಯ್ಕೆಯಾದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಅಭಿನಂದನೆಗಳ ಮಹಾಪೂರ…!

    ರಿಪ್ಪನ್‌ಪೇಟೆಯಲ್ಲಿ ನವವಿವಾಹಿತೆ ಅಪಹರಣದ ಆರೋಪ! ಎರಡು ಕಾರುಗಳಲ್ಲಿ ಬಂದು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ

    ರಿಪ್ಪನ್‌ಪೇಟೆಯಲ್ಲಿ ನವವಿವಾಹಿತೆ ಅಪಹರಣದ ಆರೋಪ! ಎರಡು ಕಾರುಗಳಲ್ಲಿ ಬಂದು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ

    ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕಿ ರತ್ನಕುಮಾರಿಗೆ SBI ಗೌರವ | ಹೊಸನಗರ | Malnad Suddi Express