ಕಾರ್ ಹಾಗೂ ಬೈಕ್ ಅಪಘಾತ ಬೈಕ್ ಸವಾರ ದುರ್ಮರಣ

Posted by

ವ್ಯಾಗನರ್ ಕಾರು–ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಯುವಕ ಸಾವು

ಆನಂದಪುರ: ವ್ಯಾಗನರ್ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ರಿಪ್ಪನ್ ಪೇಟೆಯಿಂದ ಆನಂದಪುರ ಕಡೆಗೆ ಬರುತ್ತಿದ್ದ ಬೈಕು ಹಾಗೂ ಆನಂದಪುರದಿಂದ ರಿಪ್ಪನ್ ಪೇಟೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಬೈಕ್ ಸವಾರರಾದ ಆನಂದಪುರ ಸಮೀಪದ ಬೀಸನ ಗದ್ದೆಯ ಮಹೇಶ್ (26) ತಂದೆ ಓಂಕೇಶ್ ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ವರದಿ : ಅಂಜನ್ ಕೆರೆಹಳ್ಳಿ

Leave a Reply

Your email address will not be published. Required fields are marked *