ಬಿಡದಿ: ಕುರಿ ಮತ್ತು ಮೇಕೆಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ. ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೇರಿ ಒಟ್ಟು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.


ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಗುಪ್ಪೆ ಗ್ರಾಮದ ಕುರಿ–ಮೇಕೆ ಫಾರಂನ ಬೀಗ ಮುರಿದು ಕಳ್ಳತನ ನಡೆದ ಘಟನೆ ಸಂಬಂಧ ಮೊ. ಸಂ: 72/2026 ಅಡಿಯಲ್ಲಿ ಕಲಂ 331(4), 305 BNS ಪ್ರಕಾರ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖೆ ವೇಳೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ವಿಚಾರಣೆ ನಡೆಸಿದಾಗ, ಸುಮಾರು 2.80 ಲಕ್ಷ ರೂಪಾಯಿ ಮೌಲ್ಯದ ಕುರಿ ಮತ್ತು ಮೇಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 2 ದ್ವಿಚಕ್ರ ವಾಹನಗಳು ಹಾಗೂ 1 ಓಮಿನಿ ಕಾರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯ ಮೂಲಕ ಒಟ್ಟು 3 ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಬಿಡದಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡದ ಕಾರ್ಯಕ್ಷಮತೆ ಗಮನಾರ್ಹವಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *