ಈ ಕುರಿತು ನಮ್ಮ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಲಿಫ್ಟ್‌ನಲ್ಲಿ ಯಾವುದೇ ತಾಂತ್ರಿಕ ದೋಷವಿಲ್ಲ ಎಂದು ತಿಳಿಸಿದ್ದಾರೆ. ಕೇವಲ ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ ಲಿಫ್ಟ್ ಕಾರ್ಯನಿರ್ವಹಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು ಎಂದು ಹೇಳಿದ್ದಾರೆ.ಗ್ರಾಹಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಸಂಸ್ಥೆ ಸದಾ ಆದ್ಯತೆ ನೀಡುತ್ತದೆ. “ಗ್ರಾಹಕರೇ ನಮ್ಮಿಗೆ ದೇವರು. ಅವರ ಸಮಸ್ಯೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ,” ಎಂದು ವಿಜಯ ಶೆಟ್ಟಿ ತಿಳಿಸಿದ್ದಾರೆ.ಘಟನೆ ನಡೆದ ತಕ್ಷಣವೇ ಲಿಫ್ಟ್ ಇಂಜಿನಿಯರ್‌ಗಳನ್ನು ಕರೆಸಿ ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆಯ ನಂತರ ಲಿಫ್ಟ್‌ನಲ್ಲಿ ಯಾವುದೇ ದೋಷ ಇಲ್ಲದೆ, ವಿದ್ಯುತ್ ಕಡಿತದಿಂದ ಮಾತ್ರ ಈ ಸಮಸ್ಯೆ ಉಂಟಾಗಿದೆ ಎಂಬುದು ದೃಢಪಟ್ಟಿದೆ.ಮುಂದಿನ ದಿನಗಳಲ್ಲಿ ಇಂತಹ ತೊಂದರೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಸಂಸ್ಥೆಯ ಎಲ್ಲಾ ವ್ಯವಸ್ಥೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ.

ವರದಿ : ಕೆರೆಹಳ್ಳಿ ಅಂಜನ್

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *