ರಾಮನಗರ: ಮಾದಕ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹1 ಲಕ್ಷ ದಂಡ ವಿಧಿಸಿ ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ರಾಮನಗರ ಟೌನ್‌ನ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತನಗರದ ರಾಯರದೊಡ್ಡಿ ಬೀದಿಯ ಮನೆಯೊಂದರಲ್ಲಿ ಮಾದಕ ವಸ್ತು ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಸುಮಾರು 44 ಕೆ.ಜಿ ತೂಕದ ಮಾದಕ ವಸ್ತುವನ್ನು ವಶಪಡಿಸಿಕೊಂಡು, ಐಜೂರು ಪೊಲೀಸ್ ಠಾಣೆಯಲ್ಲಿ ಮೊ.ಸಂ_____ ಅಡಿ NDPS ಕಾಯ್ದೆಯ 20(c) ವಿಧಿಯಂತೆ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದಲ್ಲಿ ಆರೋಪಿಗಳಾದ
ಸಿದ್ದಿಕ್ ಬಿನ್ ಸೈಯದ್ ಮೊಹದಿನ್ (ಐಜೂರು, ರಾಮನಗರ),
ಬೈರೇಗೌಡ ಬಿನ್ ನಿಂಗಪ್ಪ (ಹನುಮಂತನಗರ, ರಾಮನಗರ),
ಮೊಹಮದ್ ಅಲಿ ಬಿನ್ ಅಬ್ಬು (ಕಲ್ಲುಬಾಳೆ, ವಿರಾಜಪೇಟೆ, ಕೊಡಗು),
ಮೊಹಮ್ಮದ್ ಇಸ್ಮಾಯಿಲ್ (ಕಲ್ಕುಣಿ ಗ್ರಾಮ, ಮಳವಳ್ಳಿ, ಮಂಡ್ಯ)
ಇವರನ್ನು ಬಂಧಿಸಿ ತನಿಖೆ ನಡೆಸಿ, ನಂತರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಎಂ.ಹೆಚ್. ಅಣ್ಣಯ್ಯ ಅವರು ಆರೋಪಿಗಳು ತಪ್ಪಿತಸ್ಥರು ಎಂದು ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರಿಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ₹1 ಲಕ್ಷ ದಂಡ ವಿಧಿಸಿ ಆದೇಶಿಸಿದರು.
ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ವಂಸತಿ ಅಂಗಡಿ ವಾದ ಮಂಡಿಸಿದ್ದು, ತನಿಖಾಧಿಕಾರಿಗಳಾದ ಪಿಎಸ್‌ಐ ಶುಭಾಂಭಿಕ, ಸಿಪಿಐ ನರಸಿಂಹಮೂರ್ತಿ, ಪಿಎಸ್‌ಐ ಜಾರ್ಜ್ ಪ್ರಕಾಶ್ ಹಾಗೂ ಸಿಬ್ಬಂದಿ ಲೋಕೇಶ್ (HC-59), ಶಿವಕುಮಾರ್ (PC-47), ಪ್ರಸನ್ನ (PC-554) ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ಪ್ರಕರಣದಲ್ಲಿ ಶಿಕ್ಷೆ ಖಚಿತಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *