ಹೊಸನಗರ ತಾಲೂಕಿನ ಕೆರೆಹಳ್ಳಿ ಹೋಬಳಿಯ ಬೆನವಳ್ಳಿ ಗ್ರಾಮದ ಶ್ರೀಮತಿ ಗೌರಮ್ಮ ಕೋಂ ಮಂಜಪ್ಪ ಅವರು 2025-26ನೇ ಸಾಲಿನ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ATMA) ವತಿಯಿಂದ ನೀಡುವ ಜಿಲ್ಲಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಭಾಜನರಾಗಿದ್ದಾರೆ
ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ನೂತನ ತಂತ್ರಜ್ಞಾನಗಳ ಅಳವಡಿಕೆ, ಸಮಗ್ರ ಕೃಷಿ ಪದ್ಧತಿಗಳ ಅನುಸರಣೆ ಹಾಗೂ ಉತ್ತಮ ಉತ್ಪಾದನೆ ಸಾಧನೆ ಮಾಡಿದ ರೈತರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. Agricultural Technology Management Agency ಯೋಜನೆಯಡಿ ರೈತರಿಗೆ ತರಬೇತಿ, ಪ್ರದರ್ಶನ, ತಾಂತ್ರಿಕ ಮಾರ್ಗದರ್ಶನ ಹಾಗೂ ಹೊಸ ಕೃಷಿ ವಿಧಾನಗಳ ಪರಿಚಯ ಮಾಡಿಸುವ ಕಾರ್ಯ ನಡೆಯುತ್ತದೆ.
ಗೌರಮ್ಮ ಅವರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಬೆಳೆ ಉತ್ಪಾದನೆ, ಪಶುಸಂಗೋಪನೆ ಹಾಗೂ ಇತರೆ ಕೃಷಿ ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರ ಸಾಧನೆ ಸ್ಥಳೀಯ ರೈತರಿಗೆ ಪ್ರೇರಣೆಯಾಗಿ ಪರಿಣಮಿಸಿದೆ.
ಜಿಲ್ಲಾ ಮಟ್ಟದ ಈ ಪ್ರಶಸ್ತಿ ರೈತರಿಗೆ ಉತ್ತೇಜನ ನೀಡುವ ಜೊತೆಗೆ ಆಧುನಿಕ ಕೃಷಿ ಪದ್ಧತಿಗಳತ್ತ ಅವರನ್ನು ಪ್ರೇರೇಪಿಸುವ ಉದ್ದೇಶ ಹೊಂದಿದೆ.
ಸ್ಥಳೀಯ ಜನರು ಹಾಗೂ ರೈತ ಸಮುದಾಯವು ಗೌರಮ್ಮ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *