ದೇರಳಕಟ್ಟೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆನಲ್ಲಿ ಅಪರೂಪದ ಹಾಗೂ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.ಈಗಾಗಲೇ ಎರಡು ಬಾರಿ ಹೆರಿಗೆ ಶಸ್ತ್ರಚಿಕಿತ್ಸೆ (ಎಲ್‌ಎಸ್‌ಸಿಎಸ್)ಗೊಳಗಾಗಿದ್ದ ಮಹಿಳಾ ರೋಗಿಯಲ್ಲಿ ಭಾರಿ ಗಾತ್ರದ ಅಂಡಾಶಯದ ಕೋಶ (ಸಿಸ್ಟ್) ಪತ್ತೆಯಾಗಿತ್ತು. ಸುಮಾರು 6.5 x 25.5 x 28.5 ಸೆಂ.ಮೀ ಅಳತೆಯ ಈ ಸಿಸ್ಟ್‌ನ್ನು ಲಾಪರೋಟಮಿ ವಿಧಾನದಲ್ಲಿ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಯಶಸ್ವಿಯಾಗಿ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.ಸುಮಾರು 8 ಕೆ.ಜಿ. 300 ಗ್ರಾಂ ತೂಕದ ಎಡ ಅಂಡಾಶಯದ ಸಿಸ್ಟ್‌ನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಹೊರತೆಗೆದು, ಅಗತ್ಯವಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಗರ್ಭಾಶಯ ಮತ್ತು ಬಲ ಅಂಡಾಶಯವನ್ನು ಕೂಡ ತೆಗೆದುಹಾಕಲಾಗಿದೆ.ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಡಾ. ವಿಜಯಾ ಎಂ. ರೇವಣಕರ್ ಅವರ ಮಾರ್ಗದರ್ಶನದಲ್ಲಿ, ಡಾ. ಪೂರ್ವಿಕಾ ಆಚಾರ್ಯ ಅವರ ಸಹಕಾರದೊಂದಿಗೆ ನೆರವೇರಿಸಲಾಯಿತು. ಅರಿವಳಿಕೆ ತಜ್ಞರಾದ ಡಾ. ಆತ್ಮಿಕ ಹಾಗೂ ಆಪರೇಷನ್ ಥಿಯೇಟರ್ ಸಿಬ್ಬಂದಿ ತಂಡದ ಸಹಕಾರವೂ ಪ್ರಮುಖವಾಗಿತ್ತು.ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ತೊಂದರೆಗಳಿಲ್ಲದೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಈ ಸಂದರ್ಭದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ್ ಶೆಟ್ಟಿ ಕೆ. ಸೇರಿದಂತೆ ಹಲವು ವೈದ್ಯರು ಉಪಸ್ಥಿತರಿದ್ದರು.ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಡೀನ್ ಡಾ. ಬಿ. ಸಂದೀಪ್ ರೈ ಹಾಗೂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುಮಲತಾ ಆರ್ ಶೆಟ್ಟಿ ಅವರು ವೈದ್ಯಕೀಯ ತಂಡವನ್ನು ಅಭಿನಂದಿಸಿದರು.ಈ ಯಶಸ್ವಿ ಶಸ್ತ್ರಚಿಕಿತ್ಸೆ ಆಸ್ಪತ್ರೆಯ ವೈದ್ಯಕೀಯ ನಿಪುಣತೆ ಹಾಗೂ ತಾಂತ್ರಿಕ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *