ರಿಪ್ಪನ್‌ಪೇಟೆ: ಕ್ಯಾಂಪ್ಕೋ ಹಾಗೂ ಪ್ರಾಥಮಿಕ ಕೃಷಿ ಸಹಕಾರ ಸಂಘ ನಿ., ರಿಪ್ಪನ್‌ಪೇಟೆ ಇವರ ಸಹಯೋಗದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ಸಮಾರಂಭ ಇಂದು ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ಅಡಿಕೆ ಬೆಳೆಗಾರರಿಗೆ ನೇರವಾಗಿ ಬೆಂಬಲ ನೀಡುವ ಉದ್ದೇಶದಿಂದ ಈ ಖರೀದಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ತಿಳಿಸಲಾಯಿತು. ಈ ಕೇಂದ್ರದ ಮೂಲಕ ಸ್ಥಳೀಯ ಬೆಳೆಗಾರರಿಗೆ ನ್ಯಾಯಸಮ್ಮತ ಬೆಲೆ ದೊರಕುವಂತಾಗಿದ್ದು,

ಮಧ್ಯವರ್ತಿಗಳ ಸಮಸ್ಯೆ ಕಡಿಮೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಯಿತು.ಉದ್ಘಾಟನಾ ಸಮಾರಂಭದಲ್ಲಿ. ಆರ್ ಎಂ ಮಂಜುನಾಥ್ ಗೌಡ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಾನ್ಯ ಅಧ್ಯಕ್ಷರು ಎಂಎಂ ಪರಮೇಶ್ ಬಂಡಿ ರಾಮಚಂದ್ರ ಕ್ಯಾಂಪ್ಕೋ ಅಧ್ಯಕ್ಷರು ಸತೀಶ್ ಚಂದ್ರ. ತಿಮ್ಮ ನಾಯಕ್ ಸಹಕಾರಿ ಸಂಘದ ಅಧ್ಯಕ್ಷರು ಮಾತನಾಡಿದ ಗಣ್ಯರು, ಅಡಿಕೆ ಬೆಳೆಗಾರರ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಇಂತಹ ಕೇಂದ್ರಗಳು ಬಹಳ ಸಹಕಾರಿ ಎಂದರು. ಬೆಳೆಗಾರರು ಕೂಡ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಕ್ಯಾಂಪ್ಕೋ ಪ್ರತಿನಿಧಿಗಳು, ಸ್ಥಳೀಯ ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *