ಮಕ್ಕಳ ಮೊಬೈಲ್ ಬಳಕೆ ಕುರಿತು ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. 6ರಿಂದ 9 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನೋಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಸಲಹೆ ನೀಡಲಾಗಿದೆ. ಆದರೆ ಇದರ ಜವಾಬ್ದಾರಿ ಮೊದಲಿಗೆ ತಂದೆತಾಯಿಗಳ ಮೇಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಮಕ್ಕಳಿಗೆ ಅತಿಯಾಗಿ ಮೊಬೈಲ್ ಬಳಕೆ ನೀಡುವುದರಿಂದ ಅವರ ಮಾನಸಿಕ ಮತ್ತು ದೈಹಿಕ

ಬೆಳವಣಿಗೆ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ, ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವಂತೆ ಹಾಗೂ ಮಕ್ಕಳ ಜೊತೆ ಹೆಚ್ಚು ಸಮಯ ಕಳೆಯುವಂತೆ ಪಾಲಕರಿಗೆ ಸೂಚಿಸಲಾಗಿದೆ.ಎಸ್ಪಿ ಯಶೋಧಾ ವಂಟಗೋಡಿ ಅವರು ಈ ಕುರಿತು ಮಾತನಾಡಿ, “ಮೊದಲು ತಂದೆತಾಯಿಗಳೇ ಮೊಬೈಲ್ ಬಳಕೆ ನಿಯಂತ್ರಿಸಬೇಕು. ಮಕ್ಕಳ ಮುಂದೆ ಹೆಚ್ಚು ಮೊಬೈಲ್ ಬಳಸಬಾರದು” ಎಂದು ತಿಳಿಸಿದ್ದಾರೆ.ಈ ಕ್ರಮದಿಂದ ಮಕ್ಕಳ ಆರೋಗ್ಯ ಮತ್ತು ಶಿಸ್ತಿನ ಬೆಳವಣಿಗೆಗೆ ಸಹಕಾರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *