ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ರಿಪ್ಪನಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ .

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *