ಶಿರಸಿ: ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕ್ರೈಮ್ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜಕುಮಾರ್ ಉಕ್ಕಲಿ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಲಭಿಸಿದೆ.
ಯುವ ಹಾಗೂ ಚುರುಕು ಪೊಲೀಸ್ ಅಧಿಕಾರಿಯಾಗಿರುವ ಅವರು ದಿಟ್ಟತನ, ಪ್ರಾಮಾಣಿಕತೆ ಹಾಗೂ ಶಿಸ್ತುಬದ್ಧ ಕಾರ್ಯಶೈಲಿಯಿಂದ ಗಮನ ಸೆಳೆದಿದ್ದಾರೆ. ಪೊಲೀಸ್ ಇಲಾಖೆಗೆ ಮಾದರಿಯಾದ ಸೇವೆ ಸಲ್ಲಿಸುತ್ತಿರುವ ರಾಜಕುಮಾರ್ ಅವರು ಶಿರಸಿಗೆ ವರ್ಗಾವಣೆಯಾದ ಬಳಿಕ ಅನೇಕ ಪ್ರಮುಖ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ.
ಹೊಸ ಪ್ರಕರಣಗಳ ತನಿಖೆಯ ಜೊತೆಗೆ, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಹಳೆಯ ಪ್ರಕರಣಗಳನ್ನು ಸಹ ಬೇರೆ ರಾಜ್ಯಗಳಿಗೆ ತೆರಳಿ ಭೇದಿಸಿರುವುದು ಅವರ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ. ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡ ಆರೋಪಿಗಳು, ದರೋಡೆಕೋರರು, ಕಳ್ಳರು ಹಾಗೂ ನಾಪತ್ತೆಯಾದವರನ್ನು ಪತ್ತೆಹಚ್ಚುವಲ್ಲಿ ಅವರು ತೋರಿದ ಎದೆಗಾರಿಕೆ ಪ್ರಶಂಸನೀಯವಾಗಿದೆ.
ಇವರ ನಿಷ್ಠಾವಂತ ಸೇವೆಯನ್ನು ಗುರುತಿಸಿದ ಸರ್ಕಾರವು ಇವರನ್ನು ವಿಶೇಷ ತನಿಖಾ ದಳ (SIT) ಕಾರ್ಯಗಳಿಗೆ ನಿಯೋಜಿಸಿರುವುದು ಅವರ ಸಾಮರ್ಥ್ಯವನ್ನು ತೋರಿಸುತ್ತದೆ.
ಪಿಎಸ್‌ಐ ರಾಜಕುಮಾರ್ ಉಕ್ಕಲಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಹಾಗೂ ಡಿವೈಎಸ್ಪಿ ಗೀತಾ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿ, ಮುಂದಿನ ಸೇವಾ ಜೀವನಕ್ಕೆ ಶುಭ ಹಾರೈಸಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *