ರಿಪ್ಪನ್ ಪೇಟೆ: ಸಮೀಪದ ಹಾಲುಗುಡ್ಡೆಯ ಅರಕಲಸರ ಗ್ರಾಮದ ನಿವಾಸಿ ಯೋಗೇಂದ್ರ (27), ತಂದೆ ಕುಬೇರಪ್ಪ, ಮರದಿಂದ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಯೋಗೇಂದ್ರ ಅವರು ಮರ ಏರಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಅವರಿಗೆ ಬೆನ್ನು ಮೂಳೆ ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ.ತಕ್ಷಣವೇ ಅವರನ್ನು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *