ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಅಧಿಕಾರಿಗಳ ನಿರ್ಲಕ್ಷ್ಯವೇ? ಅತವಾ ಅಧಿಕಾರಿಗಳು ಕೈ ಜೋಡಿಸಿದ್ದಾರೆಯೇ ??! ಎಂಬ ಅನುಮಾನ ಸ್ಥಳೀಯರಲ್ಲಿ ಹುಟ್ಟಿದೆ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಗ್ರಾಮದಲ್ಲಿನ ಕೆಲವೆಡೆ ದಿನದ ಬೆಳಗ್ಗಿನಿಂದಲೇ ಇಲ್ಲದ ಮೊಬೈಲ್ನ ನೆಟ್ವರ್ಕ್ ನಡೆಯುತ್ತಿರುವ ಹೆಚ್ಚುತ್ತಿರುವ ಮದ್ಯ ಮಾರಾಟ . ಜ್ಯೂಸ್ ಲೈನ್ ನಂತೆ ಸ್ಕೂಟಿ ಓಮಿನಿ ಮುಕಾಂತರ ಮದ್ಯ ಸಪ್ಲೈ ಮಾಡುವುದರಿಂದ ಕಾರ್ಮಿಕರು ಯುವಜನತೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ಇಷ್ಟೊಂದು ಪ್ರಮಾಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ, ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಣು ಮುಚ್ಚಿ ಕುಳಿತಿರುವರೇ!! ಅಥವಾ ಅಧಿಕಾರಿಗಳು ಕೈಜೋಡಿಸಿದ್ದಾರೆಯೇ!!? ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಗ್ರಾಮದಲ್ಲಿ ಮುಕ್ತವಾಗಿ ಮದ್ಯ ಮಾರಾಟ ನಡೆಯುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಭೀತಿ ಎದುರಾಗಿದೆ.ಈ ಕುರಿತು ಹಲವಾರು ಬಾರಿ ಸ್ಥಳೀಯರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ, ಯಾವುದೇ ದೃಢವಾದ ಕ್ರಮ ಕೈಗೊಳ್ಳಲಾಗಿಲ್ಲ ಹಾಗಾದರೆ ಕಾರಣವಾದರು ಏನು?? ಎಂದು ಆರೋಪಿಸಲಾಗಿದೆ. ಅಕ್ರಮ ಮದ್ಯ ಮಾರಾಟದಿಂದಾಗಿ ಕುಟುಂಬಗಳಲ್ಲಿ ಕಲಹ, ಆರೋಗ್ಯ ಸಮಸ್ಯೆಗಳು ಹಾಗೂ ಸಾಮಾಜಿಕ ಅಶಾಂತಿ ಉಂಟಾಗುತ್ತಿರುವುದಾಗಿ ಗ್ರಾಮಸ್ಥರು ಹೇಳುತ್ತಾರೆ.ಸ್ಥಳೀಯರು ತಕ್ಷಣವೇ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *