ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೇಹಳ್ಳ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 36 ಮಂದಿ ಗಾಯಗೊಂಡಿದ್ದಾರೆ.ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಸೇತುವೆಯಿಂದ ಹಳ್ಳಕ್ಕೆ ಉರುಳಿದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *