ಹುಣಸೂರು: ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿ, ಒಣಗಿದ ದಾಸವಾಳ ಹೂವನ್ನು ನುಂಗಿದ ಪರಿಣಾಮ 6 ತಿಂಗಳ ಮಗು ಸಾವನ್ನಪ್ಪಿದೆ.ಮೃತ ಮಗುವನ್ನು ಚಿನ್ಮಯಿ ಗೌಡ (ಸುಮಾರು ಆರೂವರೆ ತಿಂಗಳು) ಎಂದು ಗುರುತಿಸಲಾಗಿದೆ.

ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ಒಣ ದಾಸವಾಳ ಹೂವಿನೊಂದಿಗೆ ಮಗು ಆಟವಾಡುತ್ತಿದ್ದ ವೇಳೆ, ಅದನ್ನು ಬಾಯಿಗೆ ಹಾಕಿಕೊಂಡು ನುಂಗಿದ ಪರಿಣಾಮ ಈ ದುರ್ಘಟನೆ ನಡೆದಿದೆ.ಹೂವು ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡ ಕಾರಣ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.ಈ ಘಟನೆ ಗ್ರಾಮದಲ್ಲಿ ದುಃಖದ ವಾತಾವರಣ ಮೂಡಿಸಿದ್ದು, ಸಣ್ಣ ಮಕ್ಕಳ ಬಳಿ ಸಣ್ಣ ವಸ್ತುಗಳನ್ನು ಇರಿಸುವುದರಲ್ಲಿ ಎಚ್ಚರಿಕೆ ವಹಿಸಬೇಕು ಎಂಬ ಸಂದೇಶ ನೀಡಿದೆ.ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *