ಶಿವಮೊಗ್ಗ: ವಾರಸುದಾರರಿಲ್ಲದೆ ಪೊಲೀಸ್ ವಶದಲ್ಲಿರುವ ವಾಹನಗಳನ್ನು ಸಾರ್ವಜನಿಕರಿಗೆ ಬಹಿರಂಗ ಹರಾಜು ಮೂಲಕ ನೀಡಲು ನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ಆವರಣದಲ್ಲಿ ಏಪ್ರಿಲ್ 6, 2026ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.ಶಿವಮೊಗ್ಗದ 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ, ಠಾಣೆಯಲ್ಲಿ ಸಂಗ್ರಹವಾಗಿರುವ ಒಟ್ಟು 08 ವಿವಿಧ ವಾಹನಗಳನ್ನು ಹರಾಜಿನ ಮೂಲಕ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ.ಹರಾಜು ದಿನದಂದು ಬೆಳಿಗ್ಗೆ 10 ಗಂಟೆಯಿಂದ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತ ಸಾರ್ವಜನಿಕರು ಸ್ಥಳಕ್ಕೆ ಬಂದು ವಾಹನಗಳ ಸ್ಥಿತಿಯನ್ನು ಪರಿಶೀಲಿಸಿ, ನಿಯಮಾನುಸಾರ ಹರಾಜಿನಲ್ಲಿ ಭಾಗವಹಿಸಬಹುದು.ಹರಾಜು ಪ್ರಕ್ರಿಯೆ ಸ್ಪಷ್ಟತೆ ಹಾಗೂ ನಿಯಮಾನುಸಾರ ನಡೆಯಲಿದ್ದು, ಭಾಗವಹಿಸಲು ಇಚ್ಛಿಸುವವರು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಯನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು. 9480803375

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *