ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಜಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ರವಿಚಂದ್ರ (40) ಹಾಗೂ ಸಂತೋಷ್ (25) ಮೃತರಾಗಿದ್ದಾರೆ. ಅವರು ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಇದಕ್ಕೂ ವಿರುದ್ಧ ದಿಕ್ಕಿನಿಂದ ಬಳ್ಳಾರಿ ಕಡೆಯಿಂದ ಚಳ್ಳಕೆರೆ ಕಡೆಗೆ ಬರುತ್ತಿದ್ದ ಲಾರಿಗೆ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಜ್ಜಿಹೋಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ತಕ್ಷಣ ರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ

ವರದಿ : ಗಣೇಶ್ ರಿಪ್ಪನ್ ಪೇಟೆ

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *