ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಚ್ಚರಿ ದಾಳಿ ನಡೆಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಶಿವಮೊಗ್ಗ, ಶಿಕಾರಿಪುರ ಮತ್ತು ಸಾಗರ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ತಂಡಗಳು ಒಂದೇ ಸಮಯದಲ್ಲಿ ದಾಳಿ ನಡೆಸಿವೆ. ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ನಿವಾಸ ಮತ್ತು ಸಾಗರ ತಾಲೂಕಿನ ಆನಂದಪುರದ ಅಚಾಪುರ ಸಮೀಪದಲ್ಲಿರುವ ಅವರ ಕ್ರಿಯೇಟಿವ್ ಶಾಲೆಯಲ್ಲೂ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.ಇದೇ ವೇಳೆ, ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೂ ದಾಳಿ ನಡೆದಿರುವುದು ತಿಳಿದುಬಂದಿದೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳ ಅಧಿಕಾರಿಗಳು ಸೇರಿಕೊಂಡು ಐದು ಪ್ರತ್ಯೇಕ ತಂಡಗಳಾಗಿ ಭಾಗವಹಿಸಿದ್ದಾರೆ.ಲೋಕಾಯುಕ್ತದ ಈ ದಾಳಿ ಹಿನ್ನೆಲೆ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವರದಿ : ಕೆರೆಹಳ್ಳಿ ಅಂಜನ್

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *