ಬೂತ್ ಸಂಖ್ಯೆ 212, ಕೆರೆಹಳ್ಳಿ — ಡಾ. ಬಿ.ಆರ್. ಅಂಬೇಡ್ಕರ್ ಜಯಂತೋತ್ಸವ ಭವ್ಯವಾಗಿ ಆಚರಣೆ2026ರ ಏಪ್ರಿಲ್ 14ರಂದು ಬೆಳಿಗ್ಗೆ 10 ಗಂಟೆಗೆ ಕೆರೆಹಳ್ಳಿಯ ಬೂತ್ ಸಂಖ್ಯೆ 212ರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಅತ್ಯಂತ ಭಕ್ತಿಭಾವ ಹಾಗೂ ಗೌರವದೊಂದಿಗೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಮುಖಂಡರಾದ ಆರ್.ಟಿ. ಗೋಪಾಲ್ ಅವರು ಪ್ರಮುಖ ಅತಿಥಿಯಾಗಿ ಭಾಗವಹಿಸಿ, ಅಂಬೇಡ್ಕರ್ ಅವರ ಮಹತ್ವದ ವಿಚಾರಧಾರೆಗಳ ಬಗ್ಗೆ ಮಾತನಾಡಿದರು. ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಹಕ್ಕುಗಳ ಸ್ಥಾಪನೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವೆಂದು ಅವರು ಒತ್ತಿ ಹೇಳಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುಂದರೇಶ್, ಜಿಲ್ಲಾ ಸಮಿತಿಯ ಸದಸ್ಯರಾದ ಶ್ರೀಮತಿ ನಾಗರತ್ನ ದೇವರಾಜ್, ಭೂತ ಅಧ್ಯಕ್ಷರಾದ ಶ್ರೀ ದೇವರಾಜ್ ಸೇರಿದಂತೆ ಬೂತ್‌ನ ಎಲ್ಲಾ ಸದಸ್ಯರುಗಳು ಸಕ್ರಿಯವಾಗಿ ಪಾಲ್ಗೊಂಡರು.


ಕಾರ್ಯಕ್ರಮಕ್ಕೆ ಸಾರ್ವಜನಿಕರ ಭಾರಿ ಹಾಜರಾತಿ ಕಂಡುಬಂದಿದ್ದು, ಉತ್ಸವದ ವೈಭವ ಹೆಚ್ಚಿಸಿತು.ಎಪಿಎಂಸಿ ಮಾಜಿ ಸದಸ್ಯರಾದ ರಾಮಚಂದ್ರ ಹಾಗೂ ರಮೇಶ್ ಅವರು ಕೂಡ ಈ ಸಂದರ್ಭದಲ್ಲಿ ಹಾಜರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.ಈ ಕಾರ್ಯಕ್ರಮವು ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ಸಹಾಯಕವಾಗಿದ್ದು, ಅಂಬೇಡ್ಕರ್ ಅವರ ಆದರ್ಶಗಳನ್ನು ಜನರಲ್ಲಿ ಮತ್ತಷ್ಟು ಬಿತ್ತುವ ಮಹತ್ವದ ಹೆಜ್ಜೆಯಾಯಿತು. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *