ಜಂಬಳ್ಳಿ: ಇಂದು ಸಂಜೆ ಜಂಬಳ್ಳಿ ಬಸ್ ಸ್ಟ್ಯಾಂಡ್ ಸಮೀಪ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ.ಗಾಯಾಳುಗಳನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಗಾಯಾಳುಗಳನ್ನು ಸೋಮಶೇಖರ್ (ತಂದೆ ಶೇಖರಪ್ಪಗೌಡ), ಸತೀಶ್ ಹಾಗೂ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಈ ಪೈಕಿ ಸೋಮಶೇಖರ್ ಅವರ ಕಾಲಿಗೆ ಗಂಭೀರ ಗಾಯವಾಗಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.ಘಟನೆ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

By Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

Leave a Reply

Your email address will not be published. Required fields are marked *